ವಾಹನಸವಾರರಿಗೆ ಮತ್ತೆ ಶಾಕ್ – ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್ ಡೀಸೆಲ್ ದರ
ಬೆಂಗಳೂರಿನಲ್ಲಿ ಪೆಟ್ರೋಲ್ ದರ 106.21 ರೂ , ದೆಹಲಿಯಲ್ಲಿ ಪೆಟ್ರೋಲ್ ದರ 102.4 ರೂ
ದಿನೇ ದಿನೇ ದೇಶದಲ್ಲಿ ಪೆಟ್ರೋಲ್ ದರ ಗಗನಕ್ಕೇರುತ್ತಿದ್ದು, ಜನಸಾಮಾನ್ಯರು ಅದ್ರಲ್ಲೂ ಮಧ್ಯಮ ವರ್ಗದ ವಾಹನ ಸವಾರರು ಪರದಾಡುವಂತಾಗಿದೆ. ಈ ನಡುವೆ ಮತ್ತೊಂದು ಶಾಕ್ ಸಿಕ್ಕದೆ. ಇಂದೂ ಕೂಡ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ. ಪೆಟ್ರೋಲ್ ಡೀಸೆಲ್ ದರ ಗರಿಷ್ಠ ಮಟ್ಟಕ್ಕೇರಿದೆ.
ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ಗೆ 26 ಪೈಸೆ ಏರಿದರೆ, ಪ್ರತೀ ಒಂದು ಲೀಟರ್ ಡೀಸೆಲ್ ದರದಲ್ಲಿ 32 ಪೈಸೆ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ 106.21 ರೂಪಾಯಿ ಆಗಿದ್ರೆ , ಡೀಸೆಲ್ ದರ 96.66 ರೂಪಾಯಿಗೆ ತಲುಪಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 102.4 ರೂಪಾಯಿಗೆ ತಲುಪಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ 108.67 ರುಪಾಯಿ ಆಗಿದೆ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ 103.36 ರೂಪಾಯಿಯಾಗಿದೆ. ಚೆನ್ನೈನಲ್ಲಿ 100.23 ರೂಪಾಯಿಯಾಗಿದೆ. ಈ ಮೂಲಕ ಅಂತರಾಷ್ಟ್ರೀಯ ತೈಲ ಬೆಲೆಯು 3 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಜಾಗತಿಕ ಉತ್ಪಾದನೆಯ ಅಡ್ಡಿಗಳಿಂದಾಗಿ ಅಂತರಾಷ್ಟ್ರೀಯ ತೈಲ ಬೆಲೆಗಳು 3 ವರ್ಷಗಳ ಗರಿಷ್ಠ ಮಟ್ಟ ತಲುಪಿದ್ದು, ಇದರಿಂದಾಗಿಯೇ ದೇಶೀಯ ಮಾರುಕಟ್ಟೆತಯಲ್ಲಿ ತೈಲ ಬೆಲೆ ಏರಿಕೆಯಾಗಿದೆ ಎನ್ನಲಾಗ್ತಿದೆ.








