ತೈಲ ಬೆಲೆ ಇಳಿದ ನಂತರ ಮಹಾನಗರಗಳಲ್ಲಿ ಪೆಟ್ರೋಲ್ ರೇಟ್ ಎಷ್ಟಿದೆ ಗೊತ್ತ ?
ತೈಲ ಕಂಪನಿಗಳು ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನ ಬಿಡುಗಡೆ ಮಾಡಿವೆ. ಶನಿವಾರ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವುದಾಗಿ ಘೋಷಿಸಿತ್ತು. ಇದಾದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಗರಿಷ್ಠ 9 ರೂ ಹಾಗೂ ಡೀಸೆಲ್ ಬೆಲೆ 7 ರೂ ಇಳಿಕೆಯಾಗಿದೆ.
ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಪ್ರತಿ ಲೀಟರ್‌ಗೆ 96.72 ರೂಪಾಯಿ, ಡೀಸೆಲ್ ಲೀಟರ್‌ಗೆ 89.62 ರೂಪಾಯಿಯಷ್ಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 111.35 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 97.28 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ, ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲೂ ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂಗೆ ಮಾರಾಟವಾಗುತ್ತಿದೆ.
ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ
ಇಂದು ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ಕೆಳಗಿನಂತಿವೆ.
ನಗರ ಡೀಸೆಲ್ ಪೆಟ್ರೋಲ್
ದೆಹಲಿ 89.62 96.72
ಮುಂಬೈ 97.28 111.35
ಕೋಲ್ಕತ್ತಾ 92.76 106.03
ಚೆನ್ನೈ 94.24 102.63
ಬೆಂಗಳೂರು 87.89 101.94
(ಪೆಟ್ರೋಲ್-ಡೀಸೆಲ್ ಪ್ರತಿ ಲೀಟರ್‌ಗೆ ರೂ.)
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ.