ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ತಲಾ 80 ಪೈಸೆ ಏರಿಕೆ
ನವದೆಹಲಿ: ದೇಶದಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 80 ಪೈಸೆ ಏರಿಕೆಯಾಗಿದೆ.
ಕಳೆದ 10 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್ಗೆ ಸರಾಸರಿ 6.40 ಹೆಚ್ಚಾಗಿದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್ಗೆ 101.81 ರೂ ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆಯೂ 80 ಪೈಸೆ ಏರಿಕೆಯಾಗಿದ್ದು, ಬೆಲೆ 93.07 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ 116.72 ರೂ, ಡೀಸೆಲ್ 100.94 ರೂ ಗೆ ಮಾರಾಟವಾಗುತ್ತಿದೆ.
ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 10ನೇ ದಿನದ ಬೆಲೆ ಏರಿಕೆಯಾಗಿದೆ.
ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 107.28 ರೂ ಮತ್ತು ಡೀಸೆಲ್ ದರ 91.25 ರೂ ಗೆ ತಲುಪಿದೆ.