ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ : ಇಂದಿನಿಂದ ಹೊಸ ದರ ಜಾರಿ

1 min read
petrol saaksha tv

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ : ಇಂದಿನಿಂದ ಹೊಸ ದರ ಜಾರಿ

ಬೆಂಗಳೂರು : ತೈಲ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದ ಜನರಿಗೆ ದೀಪಾವಳಿ ಹಬ್ಬದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರ್ಜರಿ ಗುಡ್ ನ್ಯೂಸ್ ನೀಡಿವೆ.

ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಕಡಿತಗೊಳಿಸಿದ್ದು, ಇಂದಿನಿಂದ ರಾಜ್ಯದಲ್ಲಿ ಹೊಸ ದರ ಜಾರಿಯಾಗಿದೆ.

ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳನ್ನು ಕಡಿತಗೊಳಿಸಿತು.

ಕೇಂದ್ರ ಪೆಟ್ರೋಲ್ ಮೇಲೆ 5 ರುಪಾಯಿ, ಡೀಸೆಲ್ ಬೆಲೆ 10 ರೂಪಾಯಿ ಕಡಿಮೆ ಮಾಡಿದೆ.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿತ್ತು.

petrol saaksha tv

ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ತಿಳಿಸಿದ್ದರು.

ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.

ಈ ನಮ್ಮ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದಿದ್ದರು.

ಅದರಂತೆ ರಾಜ್ಯ ಸರ್ಕಾರ ಸೂಚಿಸಿರುವಂತೆ ಇಂದು ಸಂಜೆಯಿಂದ ಪೆಟ್ರೋಲ್ ಮತ್ತು ಡಿಸೇಲ್ ಹೊಸ ದರ ಜಾರಿಯಾಗಿದೆ.

ಇಂದು ಸಂಜೆಯಿಂದ ಪೆಟ್ರೋಲ್ ಬೆಲೆಯಲ್ಲಿ 7 ರೂ. ಕಡಿತಗೊಳ್ಳಲಿದ್ದು, 100.64 ರೂ. ಆಗಲಿದೆ.

ಒಟ್ಟಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ 12 ರೂಪಾಯಿ, ಡೀಸೆಲ್ ಬೆಲೆ 17 ರುಪಾಯಿ ಕಡಿತಗೊಳಿಸಿವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd