ದಾಖಲೆ ಮಟ್ಟದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ petrol saaksha tv
ನವದೆಹಲಿ : ದೇಶದಲ್ಲಿ ತೈಲ ಬೆಲೆ ಏರಿಕೆಯ ಮಹಾ ಪರ್ವ ಮುಂದುವರೆದಿದೆ.
ದೇಶದಾದ್ಯಂತ ಇಂದೂ ಕೂಡ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ.
ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 34 ರಿಂದ 35 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು 35 ರಿಂದ 37 ಪೈಸೆ ಹೆಚ್ಚಿಸಿವೆ.
ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.29 ರೂಪಾಯಿ ಹಾಗೂ ಡೀಸೆಲ್ ದರ 97.02 ರೂಪಾಯಿ ಇದೆ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 114.14 ಕ್ಕೆ ಹಾಗೂ ಲೀಟರ್ ಡೀಸೆಲ್ 105.12 ರೂ. ಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಗೆ ಪೆಟ್ರೋಲ್ ಗೆ 105.13 ರೂ. ಇದ್ದು, ಲೀಟರ್ ಡೀಸೆಲ್ 101.25 ಕ್ಕೆ ಲಭ್ಯವಿದೆ.
ಇದಲ್ಲದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.06 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.98 ರೂ. ಗೆ ಏರಿಕೆಯಾಗಿದೆ.