ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ India saaksha tv
ನವದೆಹಲಿ : ಸತತ ಮೂರನೇ ದಿನವೂ ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ಇವತ್ತು ಪೆಟ್ರೋಲ್ ಪ್ರತಿ ಲೀಟರ್ ಮೇಲೆ 30 ಪೈಸೆ, ಡೀಸೆಲ್ ದರ 38 ಪೈಸೆ ಏರಿಕೆಯಾಗಿದೆ.
ಈ ಮೂಲಕ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂದಿನ ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.77 ರೂಪಾಯಿಗೆ ಏರಿಕೆ ಆಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.55 ರೂಪಾಯಿಗೆ ಏರಿಕೆ ಆಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ಬೆಲೆ 106.83ಕ್ಕೆ ಹಾಗೂ ಬರೋಬ್ಬರಿ 38 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ದರ 97.40 ರೂ.ಗೆ ಏರಿಕೆಯಾಗಿದೆ.