ದುನಿಯಾ ದುಬಾರಿ : ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ Petrol saaksha TV
ನವದೆಹಲಿ : ದೇಶದಲ್ಲಿ ಇಂಧನ ಬೆಲೆ ಏರಿಕೆ ಮುಂದುವರೆದಿದೆ. ಇಂದು ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ.
ಇದರೊಂದಿಗೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.84 ರೂಪಾಯಿ ಹಾಗೂ ಡೀಸೆಲ್ ದರ 94.57 ರೂಪಾಯಿ ಆಗಿದೆ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.111.77ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.52ರೂ. ಗೆ ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 109.53ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 100.37 ರೂ. ಗೆ ಏರಿಕೆಯಾಗಿದೆ.
ಅಂದಹಾಗೆ ಕಳೆದ 23 ದಿನಗಳಲ್ಲಿ 19 ಬಾರಿ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ.
ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್ ಬೆಲೆ ಶತಕದ ಗಡಿ ದಾಟಿದ್ದು, ಇದೀಗ ಡೀಸೆಲ್ ಬೆಲೆಯೂ ಸೆಂಚೂರಿ ಹೊಡೆದಿದೆ.









