ವಾಹನ ಸವಾರರಿಗೆ ಶಾಕ್ : ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ Petrol diesel
ನವದೆಹಲಿ : ದೇಶದಲ್ಲಿ ಮತ್ತೆ ತೈಲ ಬೆಲೆ ಏರಿಕೆಯಾಗಿದೆ. ಆ ಮೂಲಕ ವಾಹನ ಸವಾರರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.
ಇಂದು ಪೆಟ್ರೋಲ್ ಬೆಲೆ 23 ಪೈಸೆ ಮತ್ತು ಡೀಸೆಲ್ ಬೆಲೆ 25 ಪೈಸೆಗಳಷ್ಟು ಹೆಚ್ಚಿಸಲಾಗಿದೆ.
ಇದರಿಂದ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ. ಗಡಿ ಸಮೀಪವಿದೆ.
ಇಂದು ಬೆಲೆ ಏರಿಕೆಯಿಂದಾಗಿ ರಾಷ್ಟ್ರರಾಜಧಾನಿ ದೆಹಲಿ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93,44 ಮತ್ತು ಡೀಸೆಲ್ ಬೆಲೆ 99.71 ರಷ್ಟಾಗಿದೆ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.49 ರೂ. ಇದ್ದರೆ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 91.30 ರೂ.ಗೆ ಮಾರಾಟವಾಗುತ್ತಿದೆ.