ಪ್ಯಾರೇ ದೇಶವಾಸಿಯೋ ಗಮನಿಸಿ : ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆ
ನವದೆಹಲಿ : ದಿನೇ ದಿನೇ ಹೆಚ್ಚಾಗುತ್ತಲೇ ಇರುವ ಪೆಟ್ರೋಲ್ ಡೀಸೆಲ್ ದರದಿಂದ ತತ್ತರಿಸಿಹೋಗಿರುವ ವಾಹನಸವಾರರಿಗೆ ಇದೀಗ ಮತ್ತೊಂದು ಶಾಕ್ ಸಿಕ್ಕಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು ಗುರುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆ ಬರೆದಿದೆ.
ಪ್ರಸ್ತುತ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.24 ರೂಪಾಯಿಯಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.25 ರೂಪಾಯಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.75 ರೂಪಾಯಿ ಆಗಿದೆ.








