ಸತತ 3ನೆ ದಿನವೂ ಪೆಟ್ರೋಲ್ – ಡೀಸೆಲ್ ದರ ಏರಿಕೆ..!
ನವದೆಹಲಿ: ದೇಶದಲ್ಲಿ ಪಂಚ ರಾಜ್ಯಗಳ ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಪೆಟ್ರೋಲ್ ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಲೇ ಇದೆ.. ಸತತ ಮೂರನೇ ದಿನವು ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.
ಪ್ರತೀ ಲೀಟರ್ ಪೆಟ್ರೋಲ್ 25 ಪೈಸೆ ಮತ್ತು ಡೀಸೆಲ್ ದರ 27 ಪೈಸೆಯಷ್ಟು ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 92.05 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 82.61ರೂಗೆ ಏರಿಕೆಯಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.36ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 89.75ರೂ ಗೆ ಏರಿಕೆಯಾಗಿದೆ. ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ 100 ರೂ ಗಡಿ ದಾಟಿದ್ದು, ಇಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.08ರೂ ಗೆ ಏರಿಕೆಯಾಗಿದೆ. ಡೀಸೆಲ್ ದರ 90.05ರೂ ಗೆ ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಏರಿಕೆಯಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.17ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 27 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 87.63 ರೂಗೆ ಏರಿಕೆಯಾಗಿದೆ.