BREAKING NEWS – ಪೆಟ್ರೋಲ್ ಲೀಟರ್‌ಗೆ 9.50, ಡೀಸೆಲ್ 7 ರುಪಾಯಿ ಕಡಿತ…
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ ಕೇಂದ್ರ ಸರ್ಕಾರ ತೈಲ ಬೆಲೆಗಳ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂ ಅಬಕಾರಿ ಸುಂಕ ಕಡಿತ ಮಾಡಿದ್ದರೆ, ಪ್ರತಿ ಲೀಟರ್ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 7 ರೂ. ಇಳಿಕೆ ಮಾಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಧನ ಬೆಲೆಯ ಬಗ್ಗೆ ಶುಭ ಸುದ್ದಿ ನೀಡಿದ್ದಾರೆ. ಕೇಂದ್ರೀಯ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂಪಾಯಿ ಮತ್ತು ಡೀಸೆಲ್ ಮೇಲೆ 6 ರೂಪಾಯಿ ಕಡಿತಗೊಳಿಸಲಾಗುವುದು ಎಂದು ಅವರು ಹೇಳಿದರು. ಈ ಸುಂಕವನ್ನು ಕಡಿಮೆ ಮಾಡಿರುವುದು ವಾಹನ ಸವಾರರಿಗೆ ಭಾರೀ ಉತ್ತೇಜನ ನೀಡಿದೆ. ಪೆಟ್ರೋಲ್ ದರ ಲೀಟರ್‌ಗೆ 9.50 ರೂಪಾಯಿ ಮತ್ತು ಡೀಸೆಲ್‌ಗೆ 7 ರೂಪಾಯಿ ಇಳಿಕೆಯಾಗಲಿದೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ತೊಂದರೆಗೊಳಗಾಗಿದ್ದ ಜನರು ಈ ಸುದ್ದಿ ಕೇಳಿ ನಿಟ್ಟುಸಿರು ಬಿಟ್ಟಿದ್ದಾರೆ.