PFI Ban : ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು – ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸರ್ಕಾರ ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು, ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ.

ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದಿದ್ದಾರೆ.
ಇದೇ ವೇಳೆ ನಾವು ನುಡಿದಂತೆ ನಡೆದಿದ್ದೇವೆ ಎಂಬ ಬಿಜೆಪಿ ಟ್ವೀಟ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಇಷ್ಟು ದಿನ ಯಾಕೆ ಮಾಡಿರಲಿಲ್ಲ.
ಇಷ್ಟು ದಿನ ಏನ್ ಮಾಡ್ತಿದ್ದರು. ನಾವು ಹೇಳಿದ ಮೇಲೆ ಅವರು ಮಾಡಿದ್ದಾರೆ ಎಂದು ಹೇಳಿದ್ದಾರೆ.









