ಬೆಳಗಾವಿ: ಮದುವೆ ಮಂಟಪದಲ್ಲಿ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ. ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಉಮೇಶ್ ಬೈಲಹೊಂಗಲ ಪಟ್ಟಣದ ನಿವಾಸಿ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ ವೇಳೆ ಆತನನ್ನ ಹಿಂಬಾಲಿಸಿಕೊಂಡು ನಾಲ್ವರು ಬಂದಿದ್ದರು. ಕಲ್ಯಾಣ ಮಂಟಪಕ್ಕೆ ಬಂದು ಹೊರಗೆ ಕರೆದುಕೊಂಡು ಹೋಗಿ ಅಲ್ಲಿಂದ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ ಎನ್ನಲಾಗಿದೆ.
ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಹತ್ತಿರ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿ ಬಿಟ್ಟು ಹೋಗಿದ್ದಾರೆ. ಉಮೇಶ್ ಆರೋಪಿಗಳ ಮನೆಯ ಹೆಣ್ಣುಮಕ್ಕಳಿಗೆ ಕಾಡಿಸುತ್ತಿರುವುದಾಗಿ ಸುಳ್ಳು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಎಂಟು ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇಬ್ಬರು ಮಹಿಳೆಯರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಫೋಟೋಗ್ರಾಫರ್ ಉಮೇಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಕಿಕ್ಸೆ ಪಡೆಯುತ್ತಿದ್ದಾರೆ.








