ಮಂಗಳೂರು : ಚಿಕ್ಕ ಮಗುವಿನ ಮೇಲೆ ಹೀನ ಕೃತ್ಯ!

1 min read
mangalore saaksha tv

ಮಂಗಳೂರು : ಚಿಕ್ಕ ಮಗುವಿನ ಮೇಲೆ ಹೀನ ಕೃತ್ಯ!

ಮಂಗಳೂರು : ಎರಡು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿ ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿರುವ ಘಟನೆ ಕಡಲತಡಿ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಚಂದನ್ ಎಂಬ ವ್ಯಕ್ತಿಯ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

mangalore saaksha tv

ಪಾಂಡೇಶ್ವರಿ ವ್ಯಾಪ್ತಿಯಲ್ಲಿ ಫಿಶ್ ಕಟ್ಟಿಂಗ್ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ವಾಸಿಸುತ್ತಿದ್ದು, ಅವರ ಮಕ್ಕಳನ್ನು ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಆರೋಪಿ ಚಂದನ್ ಹೆಣ್ಣು ಮಗುವನ್ನು ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ಫಿಶ್ ಕಟ್ಟಿಂಗ್ ಟ್ಯಾಂಕ್ ನಲ್ಲಿ ಉಪ್ಪು ನೀರು ತುಂಬಿಕೊಂಡಿರುವ ಕಾರಣ ಮಗು ತೀವ್ರ ಅಸ್ತಸ್ಥಗೊಂಡಿದ್ದಾಳೆ. ಸದ್ಯ ಮಗು ಸ್ಥಿತಿ ಗಂಭೀರವಾಗಿದ್ದು, ವೆನ್ಲಾಕ್ ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd