ಇಂದು ತೆರೆ ಕಂಡಿವೆ ಸ್ಯಾಂಡಲ್ವುಡ್, ಬಾಲಿವುಡ್, ಟಾಲಿವುಡ್ ನ ಚಿತ್ರಗಳು – Saaksha Tv
ಕೊರೊನಾ ನಂತರ ಚಿತ್ರರಂಗ ಮತ್ತೆ ಮೊದಲಿನ ಚೈತನ್ಯ ಕಾಣಿಸಿಕೊಂಡಿದೆ. ಈ ವಾರ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಿವೆ. ಸ್ಯಾಂಡಲ್ವುಡ್, ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್ ನಲ್ಲಿ ಬಿಗ್ ಬಜೆಟ್ ಚಿತ್ರಗಳು ತೆರೆಗೆ ಬರುತ್ತಿವೆ.
ಇಂದು ಓಲ್ಡ್ ಮಾಂಕ್, ಬ್ಲಾಂಕ್, ಭೀಮ್ಲಾ ನಾಯಕ್, ಗಂಗೂಬಾಯಿ ಕಾಠಿಯಾವಾಡಿ ಚಿತ್ರಗಳು ತೆರೆ ಕಂಡಿವೆ.
ಓಲ್ಡ್ ಮಾಂಕ್ ನಲ್ಲಿ ಅದಿತಿ ಪ್ರಭುದೇವ ಮತ್ತು ಶ್ರೀನಿ ಅವರು ಎರಡನೇ ಬಾರಿಗೆ ಜೋಡಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ರಂಗನಾಯಕಿ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಎಸ್. ನಾರಾಯಣ್, ಸುಜಯ್ ಶಾಸ್ತ್ರಿ, ಅರುಣಾ ಬಾಲರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಇದರಲ್ಲಿ ನಟಿಸಿದ್ದಾರೆ.
‘ಅಲ್ಲದೇ ಬ್ಲಾಂಕ್’ ಚಿತ್ರ ಈಗಾಗಲೇ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಕೃಷಿ ತಾಪಂಡ, ಭರತ್ ಹಾಸನ್, ರಶ್ ಮಲ್ಲಿಕ್, ಸಚೀಂದ್ರ ಪ್ರಸಾದ್, ಪೂರ್ಣಚಂದ್ರ ಮೈಸೂರು, ಪ್ರಶಾಂತ್ ಸಿದ್ದಿ ಮುಂತಾದವರು ‘ಬ್ಲಾಂಕ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಎಸ್. ಜಯ್ ನಿರ್ದೇಶನ ಮಾಡಿದ್ದಾರೆ.
ಇನ್ನೂ ಭೀಮ್ಲಾ ನಾಯಕ್ ಪೊಲೀಸ್ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್ ಹಾಗೂ ಬಿಜು ಮೆನನ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್ ಕಲ್ಯಾಣ್ ನಿರ್ವಹಿಸುತ್ತಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಗಂಗೂಬಾಯಿ ಆಗಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ. ಮುಂಬೈನ ಕಾಮಾಟಿಪುರದ ಡಾನ್ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ.








