ನಡೆದಾಡುವ ದೇವರಿಗೆ ಭಾರತ ರತ್ನ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ರೆಹಾನ್ ಖಾನ್ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಹೈಕೋರ್ಟ್ ಆದೇಶ ಹೊರಡಿಸಿದ್ದು, ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ.
ಅಲ್ಲದೇ ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಇತ್ತ ಪರಮಪೂಜ್ಯರ ಜನ್ಮದಿನೋತ್ಸವ ಅಂಗವಾಗಿ ಸಿದ್ದಗಂಗಾ ಶ್ರೀಮಠ ಮದುವಣಗಿತ್ತಿಯಂತೆ ಸಿಂಗರಗೊಂಡಿದ್ದು, ಶ್ರೀಗಳು ಕುಳಿತುಕೊಳ್ಳುತ್ತಿದ್ದ ಪೀಠದ ಸ್ಥಳವನ್ನ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಸ್ವಾಮೀಜಿ ಪೀಠದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುತ್ತಿದ್ದರು. ಇದೀಗ ಪೀಠದ ಬಳಿ ಸ್ವಾಮೀಜಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಬೆಳಗ್ಗಿನಿಂದಲೇ ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ.









