ಕರ್ನಾಟಕದ ಕೋವಿಡ್ ಮಾರ್ಗಸೂಚಿಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧ – ಕೇರಳ ಸಿಎಂ ಪಿಣರಾಯಿ ವಿಜಯನ್

1 min read

ಕರ್ನಾಟಕದ ಕೋವಿಡ್ ಮಾರ್ಗಸೂಚಿಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧ – ಕೇರಳ ಸಿಎಂ ಪಿಣರಾಯಿ ವಿಜಯನ್

ನೆರೆಯ ಕೇರಳದಲ್ಲಿ ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಲೇ ಇದ್ದು, ಕರ್ನಾಟಕಕ್ಕೂ ಆತಂಕ ಎದುರಾಗಿದೆ.  ಈ ನಡುವೆ ರಾಜ್ಯ ಸರ್ಕಾರವು ನಾನಾ ಕ್ರಮಗಳನ್ನ ಕೈಗೊಂಡಿದೆ.. ಅಲ್ಲದೇ  ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವವರ ಮೇಲೆ ಪ್ರಯಾಣ ನಿರ್ಬಂಧಗಳನ್ನು ಹೇರಿದೆ.

ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ನಡೆಯನ್ನ ಖಂಡಿಸಿ,  ಈ ನಿರ್ಬಂಧಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವ ಪ್ರಯಾಣ ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದೆ ಎಂದು ವಾದಿಸಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನದ ವಿರುದ್ಧ ಹೊಸ ನಿರ್ಬಂಧಗಳನ್ನು ವಿಧಿಸಿದೆ ಎಂದು ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಶಾಸಕ ಎಕೆಎಂ ಅಶ್ರಫ್ ಅವರ ವರದಿ ಸಲ್ಲಿಕೆಗೆ ಉತ್ತರಿಸಿದ ಅವರು, ವಿವಿಧ ಉದ್ದೇಶಗಳಿಗಾಗಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುತ್ತಿರುವ ರಾಜ್ಯದ ಜನರಿಗೆ ನಿರ್ಬಂಧಗಳಿಂದ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಈಗಾಗಲೇ ಕರ್ನಾಟಕದ ಡಿಜಿಪಿಯನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಚಿತಪಡಿಸಿದ್ದಾರೆ. ಕರ್ನಾಟಕ ವಿಧಿಸಿರುವ ನಿರ್ಬಂಧಗಳನ್ನು ವಿವರಿಸಿದ ಮುಖ್ಯಮಂತ್ರಿ, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಯೊಳಗಿನ ಆರ್‌ಟಿ-ಪಿಸಿಆರ್ ಕೋವಿಡ್ ನೆಗೆಟಿವ್ ವರದಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಆಗಸ್ಟ್ 2 ರಿಂದಲೇ ಆ ರಾಜ್ಯದ ಅಧಿಕಾರಿಗಳು ತಲಪಾಡಿಯ ಗಡಿ ಚೆಕ್ ಪೋಸ್ಟ್‌ನಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ಹೇಳಿದರು. ಕರ್ನಾಟಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹೋಗುವವರಿಗೆ ಮತ್ತು ಅಗತ್ಯ ಸೇವಾ ವಲಯಕ್ಕೆ ಸೇರಿದವರಿಗೆ ಈ ನಿರ್ಬಂಧಗಳಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ರಾಜ್ಯ ಪೊಲೀಸರು ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು  ಹೇಳಿದ್ದಾರೆ.

‘ಬಿಜೆಪಿ ಗದ್ದೀ ಛೋಡೋ’ – ಅಭಿಯಾನ ನಡೆಸಲು ಕಾಂಗ್ರೆಸ್ ಸಿದ್ಧ

SUV ವಾಹನ ಸ್ಪೋಟಿಸಿದ ಮಾವೋವಾದಿಗಳು – ಓರ್ವ ಸಾವು , 11 ಮಂದಿಗೆ ಗಾಯ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd