ಬೆಚ್ಚಿಬಿದ್ದ ಪಿರಿಯಾಪಟ್ಟಣ: ಹಾಡಹಗಲೇ ಬೆಂಕಿ ಹಚ್ಚಿ ಯುವತಿಯ ಕೊಲೆ..!

1 min read
mysore

ಮೈಸೂರು: ಕೊಡಗು ಗಡಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಹಾಡಹಗಲೇ ಬೆಂಕಿ ಹಚ್ಚಿ ಯುವತಿಯೊಬ್ಬಳನ್ನು ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ.
ಪಿರಿಯಾಪಟ್ಟಣದಿಂದ ಕೇವಲ 20 ಕಿ.ಮೀ ದೂರದ ರಾವಂದೂರು ಬಳಿಯ ಕಲ್ಲೂರು ಎಂಬಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ಇಂದು ಬೆಳಿಗ್ಗೆ 7 ಘಂಟೆಯ ಸುಮಾರಿಗೆ ರಸ್ತೆ ಬದಿಯಲ್ಲೆ ಅಪರಿಚಿತ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಜನರು ಓಡಾಡುವ ರಸ್ತೆಯಲ್ಲೇ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರು ನೋಡುವುದರೊಳಗೆ ಯುವತಿಯ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಮೃತ ಯುವತಿಗೆ 16ರಿಂದ 18 ವರ್ಷ ಪ್ರಾಯ ಇರಬಹುದೆಂದು ಪೋಲೀಸರು ಅಂದಾಜಿಸಲಾಗಿದೆ. ಸ್ಥಳಕ್ಕೆ ಮೈಸೂರು ಜಿಲ್ಲೆ ಎಸ್‍ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಮೈಸೂರಿನಿಂದ ಪೋಲೀಸ್ ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನಲಾಗಿದೆ.

ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಅತ್ಯಾಚಾರವೆಸಗಿದ್ದರೆ ವೈದ್ಯಕೀಯ ಪರೀಕ್ಷೆ ಮಾಡಲೂ ಬಾರದಂತೆ ಸಾಕ್ಷಿ ಸಿಗಬಾರದು ಎಂಬ ಕಾರಣಕ್ಕಾಗಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಸಾಧ್ಯತೆ ಇದೆ.
ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರಬಹುದು. ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ಯುವತಿಯರ ಮೇಲೆ ನಡೆಯುತ್ತಿರುವ ಇಂತಹ ಹೀನ ಕೃತ್ಯಗಳಿಗೆ ಗಲ್ಲುಶಿಕ್ಷೆಯಾಗುತ್ತಿದ್ದರೂ ಪಾಪಿಗಳಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ.
ಪಿರಿಯಾಪಟ್ಟಣ ಪೋಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd