ನವದೆಹಲಿ: ಇತ್ತೀಚೆಗೆ ದೇಶದಲ್ಲಿ ರೈಲು ಹಳಿ ತಪ್ಪಿಸುತ್ತಿರುವ ವಿಫಲ ಯತ್ನಗಳು ನಡೆಯುತ್ತಲೇ ಇವೆ. ಈಗ ಉತ್ತರ ಪ್ರದೇಶದಲ್ಲಿ (Uttar Pradesh) ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.
ರೈಲು ಹಳಿಗಳ ಮೇಲೆ ಮರದ ದಿಮ್ಮಿ ಇರಿಸಿ ರೈಲು (Train) ಹಳಿ ತಪ್ಪಿಸುವ ಯತ್ನವನ್ನು ದುಷ್ಕರ್ಮಿಗಳು ನಡೆಸಿದ್ದಾರೆ. ದೆಹಲಿ (Delhi) ಮತ್ತು ಲಖನೌ ನಡುವೆ ಬರೇಲಿ-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಸಾಗುವ ಹಳಿಯ ಮೇಲೆ ಸುಮಾರು 6 ಕೆಜಿಯ,ಟು ಮರದ ತುಂಡನ್ನು ಇರಿಸಿದ್ದಾರೆ. ರೈಲು ಅದಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಮರದ ತುಂಡುಗಳು ಲೋಹದ ಚಕ್ರಗಳ ಅಡಿಯಲ್ಲಿ ಸಿಕ್ಕಿಕೊಂಡಿದೆ. ಆನಂತರ ಲೋಕೋ ಪೈಲಟ್ ರೈಲನ್ನು ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇದರಿಂದಾಗಿ ಹಳಿಗಳ ಮೇಲಿನ ಸಿಗ್ನಲಿಂಗ್ ಸಾಧನ ಹಾನಿಯಾಗಿದೆ. ಸದ್ಯ ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಿಂದಾಗಿ 2 ಗಂಟೆಗಳ ಕಾಲ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ಥವಾಗಿತ್ತು. ಈ ಘಟನೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಆಕ್ರೋಶ ವ್ಯಕ್ತಪಡಿಸಿದ್ದಾರೆ.








