ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಹೋರಾಟ ನಡೆಸಿ ಕಟ್ಟಿಹಾಕಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲು ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಸೆ.16ರಂದು ಕಾಂಗ್ರೆಸ್ ಶಾಸಕ ಸಭೆ ಕರೆದಿದ್ದಾರೆ.
ಸದನದಲ್ಲಿ ಕೈಗೆತ್ತಿಕೊಳ್ಳಬೇಕಾದ ಕ್ರಮಗಳು, ಕೊರೊನಾ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರ, ಭ್ರಷ್ಟಾಚಾರ, ಡ್ರಗ್ ಮಾಫಿಯಾ, ಡಿ.ಜೆ ಹಳ್ಳಿ ಗಲಾಟೆ, ಜಿಎಸ್‍ಟಿ ಸೇರಿದಂತೆ ವಿವಿಧ ಮಸೂದೆಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಡ್ರಗ್ ಮಾಫಿಯಾಗೆ ಕಡಿವಾಣ ಹಾಕಲು ನಮ್ಮ ಸರ್ಕಾರದ ಸಮಯದಲ್ಲಿ ಪ್ರಯತ್ನ ನಡೆದಿತ್ತು. ಎನ್‍ಸಿಬಿಯವರು ಈಗ ತನಿಖೆ ಕೈಗೆತ್ತಿಕೊಂಡಿದ್ದಾರೆ. ಸಿಸಿಬಿಯೂ ತನಿಖೆ ನಡೆಸುತ್ತಿದೆ. ಸಿನಿಮಾ ನಟರು, ವಿದ್ಯಾರ್ಥಿಗಳು, ರಾಜಕಾರಣಿಗಳು ಹಾಗೂ ಅವರ ಮಕ್ಕಳು ಸೇರಿದಂತೆ ಯಾರೇ ಮಾಫಿಯಾದಲ್ಲಿ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ, ಅದಕ್ಕೆ ನಮ್ಮ ಸಹಕಾರ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ; ಡಿಕೆಶಿ, ಸಿಬಿಐಗೆ ನೋಟಿಸ್
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಸಿಬಿಐ (CBI) ತನಿಖೆಗೆ ನೀಡಿದ...