ಕಠ್ಮಂಡು: 19 ಜನ ಪ್ರಯಾಣಿಕರಿದ್ದ ವಿಮಾನ ಪತನವಾಗಿರುವ ಘಟನೆ ನಡೆದಿದೆ.
ಕಠ್ಮಂಡುವಿನ ತ್ರಿಭವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಈ ಘಟನೆ ನಡೆದಿದೆ. ಶೌರ್ಯ ಏರ್ ಲೈನ್ಸ್ ವಿಮಾನವೊಂದು ಟೇಕಾಫ್ ಆಗುವ ಸಂದರ್ಭದಲ್ಲಿ ಪತನವಾಗಿದೆ. ಅಪಘಾತಕ್ಕೀಡಾದ ವಿಮಾನದಲ್ಲಿ 19 ಪ್ರಯಾಣಿಕರು ತೆರಳುತ್ತಿದ್ದರು ಎನ್ನಲಾಗಿದೆ.
ಈ ವಿಮಾನ ಪೋಖರಾಗೆ ತೆರಳುತ್ತಿತ್ತು ಎನ್ನಲಾಗಿದೆ. ಆದರೆ, ತೆರಳುವ ವೇಳೆ ಬೆಳಗ್ಗೆ 11ಕ್ಕೆ ಅಪಘಾತ ಸಂಭವಿಸಿದೆ. ವಿಮಾನ ಸಿಬ್ಬಂದಿ ಸೇರಿದಂತೆ 19 ಜನರು ಇದ್ದರು ಎನ್ನಲಾಗಿದೆ. ಈ ಕುರಿತು ಟಿಐಎ ವಕ್ತಾರ ಪ್ರೇಮನಾಥ್ ಠಾಕೂರ್ ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.