133 ಜನ ಪ್ರಯಾಣಿಸುತ್ತಿದ್ದ ಚೀನಾ ವಿಮಾನ ಪತನ
133 ಜನರಿದ್ದ ಚೀನಾದ ವಿಮಾನವು ದಕ್ಷಿಣ ಪ್ರಾಂತ್ಯದ ಗುವಾಂಗ್ಸಿಯಲ್ಲಿ ಸೋಮವಾರ ಪತನಗೊಂಡಿದೆ. ಚೈನಾ ಈಸ್ಟರ್ನ್ ಏರ್‌ಲೈನ್ಸ್ ಬೋಯಿಂಗ್ 737 ವಿಮಾನವು ಟೆಂಗ್ ಕೌಂಟಿಯ ವುಝೌ ನಗರದ ಬಳಿ ಅಫಘಾತಕ್ಕೀಡಾಗಿದೆ ಎಂದು ಬ್ರಾಡ್‌ಕಾಸ್ಟರ್ ಸಿಸಿಟಿವಿ ಹೇಳಿದೆ.
ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು ಸತ್ತವರು ಮತ್ತು ಗಾಯಗೊಂಡವರ ಸಂಖ್ಯೆಯ ಬಗ್ಗೆ ತಕ್ಷಣದ ಮಾಹಿತಿ ಲಭ್ಯವಿಲ್ಲ ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿವೆ.
A China Eastern Airlines Boeing 737-800 operating flight MU5735 has reportedly crashed near Wuzhou in southern China. Initial reports say 133 onboard.pic.twitter.com/iipgQYGkhK
— WLVN Analysis🔍 (@TheLegateIN) March 21, 2022
ಶಾಂಘೈ ಮೂಲದ ಚೈನಾ ಈಸ್ಟರ್ನ್ ಚೀನಾದ ಪ್ರಮುಖ ಮೂರು ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿದೆ, 248 ಸ್ಥಳಗಳಿಗೆ ಸೇವೆ ಸಲ್ಲಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳ ನಿರ್ವಹಿಸುತ್ತದೆ.
https://twitter.com/i/status/1505829095204085760
ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಮಾಹಿತಿಯ ಪ್ರಕಾರ, MU5735 ಎಂಬ ವಿಮಾನವು ವಿಮಾನವು ಕುನ್ಮಿಂಗ್‌ನಿಂದ ಗುವಾಂಗ್‌ಝೌಗೆ ಹಾರುತ್ತಿತ್ತು ಎಂದು ಕಂಡುಬಂದಿದೆ.
Plane with 133 people on board crashes in China