ಬೆಂಗಳೂರು: ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣದ ವತಿಯಿಂದ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಈಗಾಗಲೇ ನಾವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ರಾಜ್ಯದಲ್ಲಿ 57.91 ಲಕ್ಷ ಹಿರಿಯ ನಾಗರಿಕರಿದ್ದಾರೆ.
ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10.47 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.