ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಿಪಿ ಕೈಬಿಟ್ಟ ಸರಕಾರ
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..
ಈ ನಡುವೆ ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಭಾರತ ಸರಕಾರ ಕೈಬಿಟ್ಟಿದೆ. ಏಮ್ಸ್-ಐಸಿಎಂಆರ್ ಕೋವಿಡ್-19 ನ್ಯಾಷನಲ್ ಟಾಸ್ಕ್ ಫೋರ್ಸ್ ಮತ್ತು ಆರೋಗ್ಯ ಸಚಿವಾಲಯ ಈ ನಿರ್ಧಾರ ಕೈಗೊಂಡಿದ್ದು ಪ್ಲಾಸ್ಮಾ ಥೆರಪಿಯಿಂದ ಕೋವಿಡ್ ರೋಗಿಗಳಿಗೆ ಯಾವುದೇ ಪ್ರಯೋಜನವಿಲ್ಲವೆಂದು ಇದರಿಂದ ತಿಳಿಯುತ್ತದೆ.
ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ನಲ್ಲಿ ಪ್ಲಾಸ್ಮಾ ಥೆರಪಿಯಿಂದ ಆಸ್ಪತ್ರೆಯಲ್ಲಿ ದಾಖಲಾದ ಸೋಂಕಿತರ ಮೇಲೆ ಉಂಟಾದ ಪರಿಣಾಮಗಳ ಕುರಿತಾದ ರಿಕವರಿ ಟ್ರಯಲ್ ವರದಿ ಪ್ರಕಟವಾದ ಬೆನ್ನಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಸಾಮಾನ್ಯ ಚಿಕಿತ್ಸಾ ಕ್ರಮಕ್ಕೆ ಹೋಲಿಸಿದಾಗ ಪ್ಲಾಸ್ಮಾ ಥೆರಪಿ 28 ದಿನಗಳ ಅವಧಿಯಲ್ಲಿನ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಿಲ್ಲ ಎಂದು ಲ್ಯಾನ್ಸೆಟ್ನಲ್ಲಿ ಪ್ರಕಟಗೊಂಡ ಅಧ್ಯಯನಾ ವರದಿ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.