ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ (Muzrai Department) ನೀರಿನ ಬಾಟಲ್ ಬಳಸದಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಸೂಚಿಸಿದ್ದಾರೆ. ಈ ವಿಷಯವಾಗಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ (Plastic Free Temple) ಪ್ರಾರಂಭ ಮಾಡುತ್ತಿದ್ದೇವೆ.
ಆದೇಶ ಜಾರಿಗೆ 2 ತಿಂಗಳು ಸಮಯ ನೀಡಲಾಗಿದೆ. ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ಇದ್ದರೆ ಅವುಗಳನ್ನು ಎರಡು ತಿಂಗಳಲ್ಲಿ ಖಾಲಿ ಮಾಡಬೇಕು. ಆದರೆ, ಯಾವುದೇ ಕಾರಣಕ್ಕೂ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಸುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನ ಪ್ರತ್ಯೇಕ ಸರ್ವೆ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೆ ಮಾಡಿ ನೋಟಿಫಿಕೇಶನ್ ನೀಡಬೇಕು ಎಂದು ಅಧಇಕಾರಿಗಳಿಗೆ ಸೂಚಿಸಿದ್ದಾರೆ.