ತುಮಕೂರು ಜಿಲ್ಲೆಯ ವಿದ್ಯಾನಗರದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸಿದ್ದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ(plastic rice)ಸಿಕ್ಕಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಅಂಗಡಿಯಲ್ಲಿ ಅಕ್ಕಿ ನೀಡುತ್ತಿದ್ದಂತೆ ತೆಗೆದುಕೊಂಡು ಹೋಗಿ ಮನೆಯಲ್ಲ ಸ್ವಚ್ಛ ಮಾಡುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೀಗಾಗಿ ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದೆ. ಅಕ್ಕಿಯೊಂದಿಗೆ ಪ್ಲಾಸ್ಕಿಕ್ ಅಕ್ಕಿಯನ್ನು ಮಿಶ್ರಣ ಮಾಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಇಂತಹ ಘಟನೆಗಳು ಈ ಹಿಂದೆಯೂ ಬೆಳಕಿಗೆ ಬಂದಿದ್ದವು. ಆದರೆ, ಅಧಿಕಾರಿಗಳು ಮಾತ್ರ ಈ ಕುರಿತು ನಿಲಕ್ಷ್ಯ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜನವರಿಯಲ್ಲಿ ಬೆಂಗಳೂರಿನ ನೆಲಮಂಗಲದ ಆನಂದನಗರದಲ್ಲಿ ಇಂತಹ ಘಟನೆಯೊಂದು ಬೆಳಕಿಗೆ ಬಂದಿತ್ತು. ಅಲ್ಲದೇ, ಅಲ್ಲಲ್ಲಿ ಇಂತಹ ಘಟನೆಗಳು ಆಗಾಗ ನಡೆದಿವೆ ಎಂದು ಸಾರ್ವಜನಿಕರು ಆರೋಪಿಸುತ್ತಲೇ ಇದ್ದಾರೆ.








