RSS ಕಾರ್ಯಕರ್ತನ ಕೊಲೆ | ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳು ವಜಾ

1 min read
high court Saaksha Tv

RSS ಕಾರ್ಯಕರ್ತನ ಕೊಲೆ | ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳು ವಜಾ

ಬೆಂಗಳೂರು: RSS ಕಾರ್ಯಕರ್ತ ಕೊಲೆ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಮತ್ತು ಯುಎಪಿಎ ಕಾಯ್ದೆ ಅಡಿ ಮಾಡಿರುವ ಆರೋಪಗಳನ್ನು ಕೈ ಬಿಡಲು ಪ್ರಕರಣದ ಆರೋಪಿಗಳಾದ ಇರ್ಫಾನ್ ಪಾಷಾ ಹಾಗೂ ಇತರ ಮೂವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಿತಿರಾಜು ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಹಾಗೇ  ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ತೀರ್ಪು ನೀಡಿದೆ.

RSS Rudresh Saaksha Tv

2016ರ ಅ.16ರಂದು ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನ ಕಾರ್ಯಕ್ರಮ ಮುಗಿಸಿ ಹಿಂದಿರುವಾಗ ಶಿವಾಜಿನಗರದಲ್ಲಿ ದುಷ್ಕರ್ಮಿಗಳು ರುದ್ರೇಶ್ ಅವರನ್ನು ಹತ್ಯೆ ಮಾಡಿದ್ದರು. ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ಆ ಬಳಿಕ ತನಿಖೆಯನ್ನು ಕೇಂದ್ರ ಸರ್ಕಾರ ಎನ್ಐಎಗೆ ವಹಿಸಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ರದ್ದುಪಡಿಸಿತ್ತು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd