ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಸಂಪೂರ್ಣ ಲಾಕ್ ಡೌನ್ ಆಗಿದೆ. ನಿನ್ನೆ ರಾತ್ರಿ ಈ ವಿಚಾರ ಘೋಷಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕ್ಯಾಬಿನೆಟ್ ಸಭೆ ನಡೆಸಿದ್ದಾರೆ. ದೇಶವು 21 ದಿನಗಳ ಕಾಲ ಬಂದ್ ಇರುತ್ತದೆ. ಈ ಕುರಿತು ಚರ್ಚಿಸಲು ಇಂದು ದೇಹಲಿಯ 7 ಲೋಕಕಲ್ಯಾಣ ಮಾರ್ಗ್ ದಲ್ಲಿರುವ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಕೊರೊನಾ ಹರುಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರ ಬಹುಮುಖ್ಯ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಅದರ ಪ್ರಕಾರ ಮೋದಿ ಮತ್ತು ಅವರ ಸಚಿವ ಸಂಪುಟದ ಸದಸ್ಯರು ನುಡಿದಂತೆ ನಡೆದಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೋದಿ ಸೇರಿದಂತೆ ಎಲ್ಲಾ ಸಚಿವರು ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದಾರೆ. ಪ್ರತಿಯೊಬ್ಬ ಸಚಿವರು ಎರಡು ಅಡಿ ದೂರದಷ್ಟು ಕುಳಿತು ಸಭೆಯಲ್ಲಿ ಭಾಗಿಯಾಗಿದ್ದರು. ಆ ಮೂಲಕ ಇಡಿ ಕ್ಯಾಬಿನೆಟ್ ಸಾಮಾಜಿಕ ಅಂತರ ಕಾಪಾಡಿಕೊಂಡಿದೆ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








