ಹಿಜಾಬ್ ವಿಚಾರಣೆ | ಎರಡು ದಿನ ಕಾಯಿರಿ : ಸುಪ್ರಿಂಕೋರ್ಟ
ನವದೆಹಲಿ: ಹಿಜಾಬ್ ಹಕ್ಕಿಗಾಗಿ ವಿದ್ಯಾರ್ಥಿನಿಯರು ಸುಪ್ರಿಂಕೋರ್ಟ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ‘ಇಂದು ಸಾಧ್ಯವಾಗುವುದಿಲ್ಲ, ದಯವಿಟ್ಟು ಇನ್ನೂ ಎರಡು ದಿನ ಕಾಯಿರಿ’ ಎಂದು ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಗಿತ್ತು. ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಇನ್ನೆರಡು ದಿನ ಕಾಯಿರಿ ಎಂದು ಎನ್.ವಿ.ರಮಣ ಹೇಳಿದ್ದಾರೆ.
ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.