ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಡಾ ಪ್ರಕರಣವನ್ನು (MUDA Scam) ಪ್ರಸ್ತಾಪಿಸಿದ್ದಾರೆ.
ಸೋನಿಪತ್ ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ಹೀಗಾಗಿ ಅವರ ವಿರುದ್ಧ ತನಿಖೆಯಾಗಲಿ ಎಂದಿದ್ದಾರೆ.
ಸಾರ್ವಜನಿಕ ಸಮಾವೇಶ (Haryana Poll Rally) ಉದ್ಧೇಶಿಸಿ ಮಾತನಾಡಿದ ಪ್ರಧಾನಿ, ಹೈಕಮಾಂಡ್ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ಸಿಕ್ಕಂತಾಗುತ್ತದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ, ಕರ್ನಾಟಕದ ಪ್ರಕರಣ ಪ್ರಸ್ತಾಪಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Government Of Karnataka) ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ. ಅಲ್ಲಿನ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ ಎಂದು ಆರೋಪಿಸಿದ್ದಾರೆ.
ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್‌ಗೆ ಹೋಗಿದ್ದರು. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ಮಂಗಳವಾರ ಹೈಕೋರ್ಟ್ ತನಿಖೆಗೆ ಆದೇಶ ಮಾಡಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಲೇಬೇಕು. ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.