ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ – ರೈತರು ಟ್ರ್ಯಾಕ್ಟರ್ ಕೊಳ್ಳಲು ಸರ್ಕಾರದಿಂದ 50% ಸಬ್ಸಿಡಿ..
ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ 2022 – ದೇಶದಲ್ಲಿ ರೈತರ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರಿಗೆ ಆರ್ಥಿಕ ಭದ್ರತೆಯನ್ನು ನೀಡಲು ಭಾರತ ಸರ್ಕಾರ ಹತ್ತು ಹಲವು ಯೋಜನೆಗಳನ್ನ ನಡೆಸುತ್ತಿದೆ. ಅವುಗಳಲ್ಲಿ ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಸಹ ಒಂದು.
ಈ ಯೋಜನೆಯಡಿ ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ ಸರ್ಕಾರದಿಂದ ಶೇ.20 ರಿಂದ 50 ರಷ್ಟು ಸಹಾಯಧನ ನೀಡಲಾಗುತ್ತಿದೆ. ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ರೈತರು ಖರೀದಿಸಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ಕೃಷಿ ಉಪಕರಣಗಳನ್ನ ಕೊಳ್ಳಲು ರೈತರಿಗೆ ಸಬ್ಸಿಡಿ ನೀಡುತ್ತಿದೆ.
ಈ ಯೋಜನೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸುವಾಗ ಅರ್ಧದಷ್ಟು ಹಣವನ್ನ ಪಾವತಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ಸರ್ಕಾರವು ಅರ್ಧದಷ್ಟು ಹಣವನ್ನು ನೀಡುತ್ತದೆ. ಕೇಂದ್ರ ಸರ್ಕಾರವಲ್ಲದೆ, ಅನೇಕ ರಾಜ್ಯ ಸರ್ಕಾರಗಳು ಟ್ರ್ಯಾಕ್ಟರ್ ಖರೀದಿಸುವಾಗ ರೈತರಿಗೆ 20 ರಿಂದ 50 ರಷ್ಟು ಸಹಾಯಧನ ನೀಡುತ್ತಿವೆ.
ನೀವು ಕೃಷಿಗಾಗಿ ಟ್ರ್ಯಾಕ್ಟರ್ ಖರೀದಿಸಲು ಯೋಜಿಸುತ್ತಿದ್ದರೆ ಮತ್ತು ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ ಅರ್ಜಿ ಸಲ್ಲಿಸಲು, ನೀವು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಇದಲ್ಲದೆ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್‌ಗಳನ್ನು ರಚಿಸಿವೆ.
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಸಬ್ಸಿಡಿ ಪ್ರಯೋಜನವನ್ನು ಪಡೆಯಲು ನೀವು ಬಯಸಿದರೆ, ಇದಕ್ಕಾಗಿ ನೀವು ಕೆಲವು ದಾಖಲೆಗಳನ್ನ ಅಗತ್ಯವಾಗಿ ಹೊಂದಿರಬೇಕು. ಆಧಾರ್ ಕಾರ್ಡ್, ಜಮೀನು ದಾಖಲೆಗಳು, ಬ್ಯಾಂಕ್ ವಿವರಗಳು, ಪಾಸ್‌ಪೋರ್ಟ್ ಗಾತ್ರದ ಫೋಟೋ ಇತ್ಯಾದಿಗಳ ಅಗತ್ಯವಿರುತ್ತದೆ.