PM ಕಿಸಾನ್ ಸಮ್ಮಾನ್ ನಿಧಿ ಯೋಜನೆ – 11 ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಇದರಡಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ. ಬಿಡುಗಡೆಯಾಗಿದೆ.
ಕೇಂದ್ರ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ರಾಷ್ಟ್ರಮಟ್ಟದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ ಆಯೋಜಿಸಲಾಗಿತ್ತು. ಅಲ್ಲಿಂದ ಪ್ರಧಾನಿ ಮೋದಿ ಅವರು ಹಲವು ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಪಿಎಂ ಕಿಸಾನ್ ಯೋಜನೆಯ 11 ನೇ ಕಂತನ್ನು ಬಿಡುಗಡೆ ಮಾಡಿದರು.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿರುವ ರಿಡ್ಜ್ ಮೈದಾನದಲ್ಲಿ ಪ್ರಧಾನಿ ಮೋದಿ ದೇಶದ ರೈತರಿಗೆ 11 ನೇ ಕಂತನ್ನು ಪ್ರಸ್ತುತಪಡಿಸಿದರು, ಇದರಲ್ಲಿ 2,000 ರೂ.ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಯಿತು.
ನಿಮ್ಮ ಖಾತೆಗೆ ಕಂತು ಬಂದಿದೆಯೇ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳುಲು ಈ ವಿಧಾನಗಳನ್ನ ಅನುಸರಿಸಿ
ಮೊದಲ ವಿಧಾನ
ನಿಮ್ಮ ಖಾತೆಗೆ ಹಣ ಬಂದ ತಕ್ಷಣ ನೀವು ಸಂದೇಶವನ್ನು ಸ್ವೀಕರಿಸುತ್ತೀರಿ. ನೀವು ಕಂತು ಪಡೆದಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ಈ ಸಂದೇಶದ ಮೂಲಕ ತಿಳಿಯಬಹುದು.
ಎರಡನೇ ವಿಧಾನ
ಕೆಲವು ಕಾರಣಗಳಿಂದ ನೀವು ಸಂದೇಶವನ್ನು ಸ್ವೀಕರಿಸದಿದ್ದರೆ, ಕಂತು ಹಣವು ಬ್ಯಾಂಕ್ ಖಾತೆಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ನೀವು ನಿಮ್ಮ ಹತ್ತಿರದ ಎಟಿಎಂಗೆ ಹೋಗಬಹುದು.
ಮೂರನೇ ವಿಧಾನ
ನಿಮ್ಮ ಖಾತೆಗೆ 2 ಸಾವಿರ ರೂಪಾಯಿ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ನೀವು ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ನಿಮ್ಮ ಪಾಸ್‌ಬುಕ್‌ನಲ್ಲಿ ನಮೂದು ಮಾಡಬಹುದು.








