PM Modi : ಆರೋಗ್ಯ ಮೈತ್ರಿ’ ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ..!!
ಪ್ರಧಾನಿ ನರೇಂದ್ರ ಮೋದಿ ಅವರು ‘ ಆರೋಗ್ಯ ಮೈತ್ರಿ’ ಯೋಜನೆಯನ್ನ ಶುಕ್ರವಾರ ಘೋಷಣೆ ಮಾಡಿದ್ದಾರೆ..
ಈ ಯೋಜನೆಯಿಂದ ನೈಸರ್ಗಿಕ ವಿಕೋಪಗಳು ಅಥವಾ ಮಾನವೀಯ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಒದಗಿಸುಬಹುದಾಗಿದೆ..
ಈ ದೇಶಗಳ ಸಮಸ್ಯೆಗಳ ಪರಿಹಾರಕ್ಕಾಗಿ ಉತ್ಕೃಷ್ಟತಾ ಕೇಂದ್ರವನ್ನೂ ಕೂಡ ಸ್ಥಾಪಿಸಲಾಗುವುದು ಎಂದು ಮೋದಿ ಅವರು ಹೇಳಿದ್ದಾರೆ..
ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯ ಮುಕ್ತಾಯದ ಅಧಿವೇಶನದಲ್ಲಿ ಮಾತನಾಡಿದ ಅವರು, ಭಾರತವು ತನ್ನ ಪರಿಣತಿಯನ್ನು ಇತರ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳಲು ವಿಜ್ಞಾನ ಮತ್ತು ತಂತ್ರಜ್ಞಾನ ಉಪಕ್ರಮವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.
PM Modi Announces Health Alliance on jan 13 2023