ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಮೇ 6ರಂದು ನಿಗದಿಯಾಗಿದ್ದ ಅವರ ರೋಡ್ ಶೋವನ್ನು ಮುಂದೂಡಲಾಗಿದೆ. ಮಳೆ ಹಾಗೂ ಟ್ರಾಫಿಕ್ ಹಿನ್ನೆಲೆಯಲ್ಲಿ ಮೇ 6ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಬೆಂಗಳೂರಿನಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೋ ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತು ಬಿಜೆಪಿ (BJP) ನಾಯಕರು ಗುರುವಾರ ಮಧ್ಯಾಹ್ನ ಮಹತ್ವದ ಸಭೆಯನ್ನು ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಶನಿವಾರ ಬೆಳಗ್ಗೆ ಹಾಗೂ ಸಂಜೆಯಿಂದ ರಾತ್ರಿಯವರೆಗೂ ಮೋದಿ ರೋಡ್ ಶೋ ನಡೆಸಲು ಈ ಮೊದಲು ಸಿದ್ಧತೆ ನಡೆಸಲಾಗಿತ್ತು. ಸದ್ಯ ರೋಡ್ ಶೋ ಕಾರ್ಯಕ್ರಮವನ್ನು ಭಾನುವಾರಕ್ಕೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗಿನ ಮೋದಿ ರೋಡ್ ಶೋನಲ್ಲಿ ಯಾವುದೇ ಬದಲಾವಣೆಯಿಲ್ಲ. ಶನಿವಾರ 10.1 ಕಿ.ಮೀ ರೋಡ್ ಶೋ ನಡೆಸಲಿದ್ದು, ಮಧ್ಯಾಹ್ನ 4ರಿಂದ ರಾತ್ರಿ 9 ಗಂಟೆವರೆಗೆ ನಿಗದಿಯಾಗಿದ್ದ ರೋಡ್ ಶೋವನ್ನು ಭಾನುವಾರ ಬೆಳಗ್ಗೆ ಮುಂದುವರೆಸಲಿದ್ದಾರೆ. ಭಾನುವಾರ ಒಟ್ಟು 26.5 ಕಿ.ಮೀ ರೋಡ್ ಶೋ ನಡೆಯುವ ಸಾಧ್ಯತೆಯಿದೆ.








