ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ condoled demise Tarun Gogoi
ಹೊಸದಿಲ್ಲಿ, ನವೆಂಬರ್24: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರ ನಿಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದುಃಖ ವ್ಯಕ್ತಪಡಿಸಿದ್ದಾರೆ.
ಅವರನ್ನು ಜನಪ್ರಿಯ ನಾಯಕ ಮತ್ತು ಅನುಭವಿ ಆಡಳಿತಗಾರ ಎಂದು ಬಣ್ಣಿಸಿದ ಪ್ರಧಾನಿ, ಅಸ್ಸಾಂ ಮಾಜಿ ಸಿಎಂ ಅವರ ಅಪಾರ ರಾಜಕೀಯ ಅನುಭವವನ್ನು ನೆನಪಿಸಿಕೊಂಡರು. condoled demise Tarun Gogoi

ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯಿ ಅವರ ನಿಧನದ ಸುದ್ದಿಯನ್ನು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅಧಿಕೃತವಾಗಿ ಘೋಷಿಸಿದರು. 5 ದಶಕಗಳಿಗಿಂತಲೂ ಹೆಚ್ಚು ಕಾಲ ಗೊಗೊಯ್ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಹಲವಾರು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಇದಲ್ಲದೆ, ಅವರು 2001 ರಿಂದ 2016 ರವರೆಗೆ ಅಸ್ಸಾಂನ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದರು.
ಉದ್ಯೋಗ ಪಡೆಯಲು ತಂದೆಯನ್ನು ಹತ್ಯೆ ಮಾಡಿದ ನಿರುದ್ಯೋಗಿ ಮಗ
ಆಗಸ್ಟ್ 25ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಗುವಾಹಟಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿತ್ತು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿಯು ಚಿಂತಾಜನಕವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಮಾರು ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನಹೊಂದಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಹಲವಾರು ಕ್ಯಾಬಿನೆಟ್ ಮಂತ್ರಿಗಳು ತರುಣ್ ಗೊಗೊಯ್ ಅವರಿಗೆ ಗೌರವ ಸಲ್ಲಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1330532549051838471?s=19
https://twitter.com/SaakshaTv/status/1330922835351457793?s=19








