ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬೆದರಿಗೆ ಕರೆ ಪೊಲೀಸ್ ಇಲಾಖೆಯಲ್ಲಿಯೇ ಕೋಲಾಹಲ ಸೃಷ್ಟಿಸಿತ್ತು.
ಪೊಲೀಸರು ಕರೆಯನ್ನು ಪತ್ತೆ ಹಚ್ಚಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ. ಕರೆಯನ್ನು ಪತ್ತೆ ಹಚ್ಚಿದ ನಂತರ ಪೊಲೀಸರು ದೆಹಲಿಯ ಪ್ರಸಾದ್ ನಗರದ ಪ್ರದೇಶದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ರಾಯಗ್ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.