SCO Summit: ರಷ್ಯಾ ಅಧ್ಯಕ್ಷ ಪುಟಿನ್ ರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ
ರಷ್ಯಾ-ಉಕ್ರೇನ್ ಯುದ್ಧದ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ಉಜ್ಬೇಕಿಸ್ತಾನ್ ಸಮರ್ಕಂಡ್ನಲ್ಲಿ ಭೇಟಿಯಾಗಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನ ಸಮಸ್ಯೆಗಳನ್ನು ಪ್ರಸ್ತಾಪಿಸಿದರು, ಈ ಸವಾಲುಗಳನ್ನು ಎದುರಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಹೇಳಿದರು.
ರಷ್ಯಾ-ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಹಾಯ ಮಾಡಿದ್ದಕ್ಕಾಗಿ ಅವರು ರಷ್ಯಾ ಮತ್ತು ಉಕ್ರೇನ್ಗೆ ಧನ್ಯವಾದ ಅರ್ಪಿಸಿದರು. ನಡೆಯುತ್ತಿರುವ ಸಂಘರ್ಷದಲ್ಲಿ, ಮೋದಿ ಅವರು ಪ್ರಜಾಪ್ರಭುತ್ವ, ರಾಜತಾಂತ್ರಿಕತೆ ಮತ್ತು ಸಂವಾದದ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಭಾರತ-ರಷ್ಯಾ ಸಂಬಂಧಗಳ ಕುರಿತು ಪ್ರಧಾನಮಂತ್ರಿ ಅವರು, ಎರಡೂ ದೇಶಗಳು ದಶಕದ ಪಾಲುದಾರರಾಗಿದ್ದಾರೆ.
ಈ ಸಂದರ್ಭದಲ್ಲಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್, ದ್ವಿಪಕ್ಷೀಯ ವ್ಯಾಪಾರ, ರಷ್ಯಾದ ರಸಗೊಬ್ಬರಗಳ ಪೂರೈಕೆ, ಕೃಷಿ ಸಹಕಾರ, ತೈಲ, ಅನಿಲ, ಪರಮಾಣು ಶಕ್ತಿ ಯೋಜನೆಗಳು ಮತ್ತು ವೀಸಾ ಮುಕ್ತ ಪ್ರವಾಸಿ ವಿನಿಮಯದಲ್ಲಿ ಸಹಕಾರವನ್ನು ಪ್ರಸ್ತಾಪಿಸಿದರು.
ಎರಡೂ ದೇಶಗಳ ನಡುವೆ ವ್ಯಾಪಾರ ವೃದ್ಧಿಯಾಗುತ್ತಿದೆ ಎಂದರು. ರಷ್ಯಾದ ಗೊಬ್ಬರದ ಪೂರೈಕೆ ಎಂಟು ಪಟ್ಟು ಹೆಚ್ಚಾಗಿದೆ, ಇದು ಹೆಚ್ಚಿನ ಜನಸಂಖ್ಯೆಗೆ ಆಹಾರ ಭದ್ರತೆಯನ್ನು ಒದಗಿಸಲು ಭಾರತಕ್ಕೆ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದರು.
ಭಾರತ-ಉಜ್ಬೇಕಿಸ್ತಾನ್ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರು ಆರ್ಥಿಕ ಸಹಕಾರ, ವ್ಯಾಪಾರ ಮತ್ತು ಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳನ್ನು ಚರ್ಚಿಸಿದರು.
ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಅಫ್ಘಾನಿಸ್ತಾನದ ವಿಷಯದಲ್ಲಿ, ಅಫ್ಘಾನಿಸ್ತಾನದ ಪ್ರದೇಶವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂದು ನಾಯಕರು ತಮ್ಮ ಅಭಿಪ್ರಾಯಗಳಲ್ಲಿ ಒಮ್ಮತವನ್ನು ಹೊಂದಿದ್ದರು.