ಬೋರಿಸ್ ಜಾನ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ ಪ್ರಧಾನಿ ಮೋದಿ…..
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ನವದೆಹಲಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಬೋರಿಸ್ ಜಾನ್ಸನ್ ಎರಡು ದಿನಗಳ ಭೇಟಿಗಾಗಿ ನಿನ್ನೆ ಭಾರತಕ್ಕೆ ಆಗಮಿಸಿದರು. ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅವರಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು. ಮಾಧ್ಯಮಗಳೊಂದಿಗೆ ಮಾತನಾಡಿದ ಬೋರಿಸ್ ಜಾನ್ಸನ್, ಭಾರತ ಮತ್ತು ಯುಕೆ ನಡುವಿನ ಸಂಬಂಧ ಮತ್ತು ಸ್ನೇಹಕ್ಕಾಗಿ ಇದು ಅತ್ಯಂತ ಮಂಗಳಕರ ಕ್ಷಣ ಎಂದು ಕರೆದರು. ದ್ವಿಪಕ್ಷೀಯ ಬಾಂಧವ್ಯಗಳು ಇಂದಿನಷ್ಟು ಉತ್ತಮ ಅಥವಾ ಗಟ್ಟಿಯಾಗಿರಲಿಲ್ಲ ಎಂದು ಅವರು ಹೇಳಿದರು.
ಜಾನ್ಸನ್ ಅವರು ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಿದರು. ಯುನೈಟೆಡ್ ಕಿಂಗ್‌ಡಂನ ಪ್ರಧಾನ ಮಂತ್ರಿಯಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಭೇಟಿ ನೀಡಿ ಗಣ್ಯರನ್ನು ಭೇಟಿ ಮಾಡಿದರು. ಪಾಲುದಾರಿಕೆ ಮತ್ತು ಭಾರತ-ಯುಕೆ ಮಾರ್ಗಸೂಚಿ-2030 ನ್ನ ಕಾರ್ಯಗತಗೊಳಿಸುವ ಕುರಿತು ಚರ್ಚಿಸಿದರು.