ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ತುಂಬಾ ಪವರ್‌ಫುಲ್ ಇರಬಹುದು. ಆದರೆ, ದೇವರಲ್ಲ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳು ಮನೀಷ್ ಸಿಸೋಡಿಯಾ (Manish Sisodia) ಮತ್ತು ನನ್ನನ್ನು ನೋಡಿ ದುಃಖಿತರಾಗಬೇಕು. ಪ್ರಧಾನಿ ಮೋದಿ ಅತ್ಯಂತ ಶಕ್ತಿಶಾಲಿ ವ್ಯಕ್ತಿ ಹಾಗೂ ಸಂಪನ್ಮೂಲ ವ್ಯಕ್ತಿ. ಮೋದಿ ದೇವರಲ್ಲ. ಇರುವ ದೇವರು ನಮ್ಮೊಂದಿಗಿದ್ದಾನೆ. ಇದರಿಂದ ನಾನು ಸುಪ್ರೀಂ ಕೋರ್ಟ್‌ಗೆ (Supreme Court) ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.
ಎಎಪಿಗೆ ಸಹಾಯ ಮಾಡಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೆಹಲಿಯಲ್ಲಿ ಆಡಳಿತವನ್ನು ಅಡ್ಡಿಪಡಿಸುವುದು ಬಿಜೆಪಿಯ (BJP) ಲೆಕ್ಕಾಚಾರವಾಗಿತ್ತು ಎಂದು ಆರೋಪಿಸಿದ್ದಾರೆ.
ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ದೆಹಲಿಯ ಪರಿಸ್ಥಿತಿಯನ್ನು ಹದೆಗಡುವಂತೆ ಮಾಡುವುದು ಬಿಜೆಪಿ ಸರ್ಕಾರ ಉದ್ದೇಶವಾಗಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ ಬಳಿಕ ದೆಹಲಿಯ ಕೆಲಸವನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.








