ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ…
ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಯಲಹಂಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಬಂದಿಳಿದಿದ್ದಾರೆ.
ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿಗಳನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.
The Prime Minister landed in Bengaluru and was received by Governor @TCGEHLOT, CM @BSBommai, former CM @BSYBJP, Minister @JoshiPralhad and other dignitaries. pic.twitter.com/ZL9w3wEmON
— PMO India (@PMOIndia) June 20, 2022
ಸುಮಾರು ಒಂದೂವರೆ ವರ್ಷದ ನಂತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಇಂದು ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಮುಖ್ಯ ಕಾರ್ಯಕ್ರಮವಾಗಿದೆ.
ಇಂದು ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೆ ಪ್ರಧಾನಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವುದರಿಂದ ಹಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ, ಪರ್ಯಾಯ ಸಂಚಾರ ಮಾರ್ಗ ವ್ಯವಸ್ಥೆ ಮಾಡಲಾಗಿದೆ.








