Atal Bihari Vajpayee : ರಾಷ್ಟ್ರಪತಿ ಮತ್ತು ಪ್ರಧಾನಿಗಳಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆಪಿ ನಡ್ಡಾ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ ಮಾಡಿ “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಜನಿಸಿದರು. ಕವಿ ತಂದೆಗೆ ಜನಿಸಿದ ವಾಜಪೇಯಿ ನಂತರ ಸ್ವತಃ ಕವಿಯಾದರು. ಕಾನ್ಪುರದಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದರು.
ವಾಜಪೇಯಿ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ಅವರ ವ್ಯಕ್ತಿತ್ವ, ಕಾವ್ಯ ಮತ್ತು ರಾಜಕೀಯ ಕೇವಲ ಭಾರತಕ್ಕೆ ಸೀಮಿತವಾಗಿಲ್ಲ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.
PM Modi, President Murmu pay tributes to Atal Bihari Vajpayee on his 98th birth anniversary