ರೈತರಿಗಾಗಿ ಇ-ಗೋಪಾಲ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಹೊಸದಿಲ್ಲಿ, ಸೆಪ್ಟೆಂಬರ್11: ಆತ್ಮನಿರ್ಭಾರ್ ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ಮೋದಿ ರೈತರಿಗಾಗಿ ಇ-ಗೋಪಾಲ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಮತ್ತು ಇ-ಗೋಪಾಲ ಆಪ್ ಅನ್ನು ರೈತರಿಗಾಗಿ ಬಿಡುಗಡೆ ಮಾಡಿದರು. ಇದು ಮೀನುಗಾರಿಕೆ ಕ್ಷೇತ್ರದ ಕೇಂದ್ರೀಕೃತ ಮತ್ತು ಸುಸ್ಥಿರ ಅಭಿವೃದ್ಧಿಗೆ ಪ್ರಮುಖ ಯೋಜನೆಯಾಗಿದೆ.
ಇ-ಗೋಪಾಲ ಆ್ಯಪ್ ರೈತರ ನೇರ ಬಳಕೆಗಾಗಿ ಸಮಗ್ರ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರೈತರು ಈ ಯೋಜನೆಯಿಂದ ಹೆಚ್ಚಿನ ಲಾಭ ಪಡೆಯುತ್ತಾರೆ. ಮುಂದಿನ 3-4 ವರ್ಷಗಳಲ್ಲಿ ನಾವು ನಮ್ಮ ಉತ್ಪಾದನೆಯನ್ನು ದ್ವಿಗುಣಗೊಳಿಸುತ್ತೇವೆ ಮತ್ತು ಮೀನುಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡುವುದು ನಮ್ಮ ಗುರಿ ಎಂದು ಹೇಳಿದ್ದಾರೆ.
ಪಿಎಂಎಂಎಸ್‌ವೈ ಹೊಸ ಕ್ಷೀರ ಕ್ರಾಂತಿ ಮತ್ತು ಸಿಹಿ ಕ್ರಾಂತಿಯ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಭಾರತದ 21 ರಾಜ್ಯಗಳು ಈ ಯೋಜನೆಯನ್ನು ಪ್ರಾರಂಭಿಸಲಿದ್ದು, ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದರು
Delhi: PM Narendra Modi digitally launches the Pradhan Mantri Matsya Sampada Yojana (PMMSY) and e-Gopala App for farmers along with several other initiatives in the fisheries and animal husbandry sectors in Bihar. pic.twitter.com/9YVmK0AMpf
— ANI (@ANI) September 10, 2020








