ಇಂದು ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ಪ್ರಧಾನಿ ಮೋದಿ ಸ್ವಾನಿಧಿ ಸಂವಾದ
ಹೊಸದಿಲ್ಲಿ, ಸೆಪ್ಟೆಂಬರ್09: ಇಂದು ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಾನಿಧಿ ಸಂವಾದ ನಡೆಸಲಿದ್ದಾರೆ. ಕೊರೋನಾ ಅವಧಿಯಲ್ಲಿ ಬಾಧಿತ ಬೀದಿ ಬದಿ ವ್ಯಾಪಾರಿಗಳಿಗೆ ಉದ್ಯೋಗ ಒದಗಿಸಲು ಮೋದಿ ಸರ್ಕಾರ ಜೂನ್ 1 ರಂದು ಪ್ರಧಾನ್ ಮಂತ್ರಿ ಸ್ವಾನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ 4.50 ಲಕ್ಷ ಅರ್ಹ ಬೀದಿ ಬದಿ ವ್ಯಾಪಾರಿಗಳನ್ನು ನೋಂದಾಯಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ಜನರನ್ನು ರಕ್ಷಿಸಲು, ಲಾಕ್ ಡೌನ್ ಜಾರಿ ಮಾಡಿತ್ತು. ಆ ಸಮಯದಲ್ಲಿ ಬೀದಿಬದಿ ವ್ಯಾಪಾರಿಗಳು ಆದಾಯವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರು. ಈ ಹಿಂದೆ ಹೂಡಿಕೆ ಮಾಡಿರುವ ಬಂಡವಾಳವನ್ನು ಕಳೆದುಕೊಂಡು ಕಂಗಾಲಾಗಿರುವ ಸಣ್ಣ ಮತ್ತು ಮಧ್ಯಮ ವರ್ಗದ ಅಂಗಡಿಗಳ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ. ಇದರಿಂದ ವ್ಯಾಪಾರಿಗಳ ಬದುಕಿಗೆ ಆರ್ಥಿಕ ಶಕ್ತಿ ತುಂಬಿ ಕೆಲಸವನ್ನು ಪುನರಾರಂಭಿಸಲು ಸಾಲ ನೀಡುವುದು ಈ ಯೋಜನೆಯ ಉದ್ದೇಶ