ಎಪ್ರಿಲ್ ನಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ – Saaksha Tv
ಬೆಂಗಳೂರು: ಎಪ್ರಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆಯ ಫಲಿತಾಂಶದ ಬಂದ ಬೆನ್ನಲ್ಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐದು ರಾಜ್ಯಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಇದು ನಮಗೆ ಸಂತಸದ ಸಂಗತಿ. ಇದು ನವ ಭಾರತಕ್ಕೆ ಮುನ್ನುಡಿ ಬರೆದಂತೆ. ಮೋದಿ ಜಿ ಅವರ ಕನಸು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗೆ ಇದು ಸಾಕ್ಷಿಯಾಗಿದೆ. ಮೋದಿಜಿಯುವರು ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು.
ಅಲ್ಲದೇ ಕಾಂಗ್ರೆಸ್ ಮುಕ್ತ ಭಾರತ ಮಾಡುವುದು ನಿಶ್ಚಯ, ಈ ಪಂಚರಾಜ್ಯ ಚುನಾವಣೆಯ ಫಲಿತಾಂಶ ರಾಜ್ಯದ ಮೇಲು ಪ್ರಭಾವ ಬೀಳಲಿದೆ. ಹಾಗೇ ಎಪ್ರಿಲ್ ನಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.








