ಇಂದು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ
ಹೊಸದಿಲ್ಲಿ, ಜೂನ್ 28 : ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಟ್ಯೂನ್ ಮಾಡಿ, ಮನ್ ಕೀ ಬಾತ್ ಎಂದು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮುಂದಿನ ಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮೊದಲಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಕೈತೊಳೆಯುವುದು ಮತ್ತು ಕೊರೊನಾ ನಿಯಂತ್ರಿಸಲು ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೇಶವಾಸಿಗಳಿಗೆ ಕರೆಕೊಟ್ಟಿದ್ದರು.