ಮಾರ್ಚ್ 26ಕ್ಕೆ ಬಾಂಗ್ಲಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
PM Modi
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇದೇ ಮಾಚ್ 26 ಮತ್ತು 27 ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹೆಚ್ ಇ ಶೇಖರ್ ಹಸೀನಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ.
ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ, ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿ 50 ವರ್ಷಗಳು ಮತ್ತು ಬಾಂಗ್ಲಾದೇಶದ ವಿಮೋಚನಾ ಯುದ್ಧಕ್ಕೆ 50 ವರ್ಷ. ಈ ಮೂರು ವಿಷಯಗಳ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಮೋದಿ ಮಾರ್ಚ್ 26ರಂದು ಬಾಂಗ್ಲಾದೇಶದ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.









