ನಾಳೆ ಜಮ್ಮು ಕಾಶ್ಮೀರಕ್ಕೆ ಮೋದಿ ಬೇಟಿ – 20 ಸಾವಿರ ಕೋಟಿ ಯೋಜನೆಗಳಿಗೆ ಶಂಕುಸ್ಥಾಪನೆ….
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಬೆಳಗ್ಗೆ 11.30ರ ಸುಮಾರಿಗೆ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಮತ್ತು ದೇಶಾದ್ಯಂತ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಗೆ ಭೇಟಿ ನೀಡಲಿದ್ದಾರೆ.
ಭೇಟಿಯ ಸಮಯದಲ್ಲಿ, ಮೋದಿ ಅವರು ಸುಮಾರು ಇಪ್ಪತ್ತು ಸಾವಿರ ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮೂರು ಸಾವಿರದ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬನಿಹಾಲ್ ಖಾಜಿಗುಂಡ್ ರಸ್ತೆ ಸುರಂಗವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
8.45 ಕಿಲೋಮೀಟರ್ ಉದ್ದದ ಸುರಂಗವು ಬನಿಹಾಲ್ ಮತ್ತು ಖಾಜಿಗುಂಡ್ ನಡುವಿನ ರಸ್ತೆಯ ಅಂತರವನ್ನು 16 ಕಿಲೋಮೀಟರ್‌ಗಳಷ್ಟು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣದ ಸಮಯವನ್ನು ಸುಮಾರು ಒಂದೂವರೆ ಗಂಟೆ ಕಡಿಮೆ ಮಾಡುತ್ತದೆ. ಏಳು ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್‌ವೇಯ ಮೂರು ರಸ್ತೆ ಪ್ಯಾಕೇಜ್‌ಗಳ ಶಂಕುಸ್ಥಾಪನೆಯನ್ನೂ ಮೋದಿ ಮಾಡಲಿದ್ದಾರೆ.