ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ವರ್ಚುವಲ್ ಸಭೆ
ನವದೆಹಲಿ: ಕಳೆದ ಎರಡು ವಾರಗಳಿಂದ ಕೊರೊನಾ ನಾಲ್ಕನೇ ಅಲೆಯ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ (PMO) ಪ್ರಕಾರ, ವರ್ಚುವಲ್ ಸಭೆಯು ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಇನ್ನೂ ಸಭೆಯಲ್ಲಿ ಪ್ರಧಾನ ಮಂತ್ರಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಈ ಹಿಂದೆಯೂ ಸಹ ಪ್ರಧಾನಿ ಮೋದಿ ಅವರು ಕೋವಿಡ್ ವಿಷಯವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,483 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬುಲೆಟಿನ್ ಪ್ರಕಾರ, ಸಕ್ರಿಯ ಪ್ರಕರಣ 15,636 ಇದ್ದರೆ, ಪಾಸಿಟಿವಿಟಿ ದರ ಶೇ.0.55 ಆಗಿದೆ.