ಜಾರ್ಜ್ಟೌನ್: ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಕ್ಕೆ ಭೇಟಿ ನೀಡಿದ್ದು, ಅದ್ದೂರಿಯಾಗಿ ಸ್ವಾಗತಿಸಲಾಗಿದೆ.
ಈ ಮೂಲಕ ಬರೋಬ್ಬರಿ 56 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಗಯಾನಕ್ಕೆ ಭೇಟಿ ನೀಡಿದ್ದಾರೆ. ಈ ಹೆಮ್ಮೆಗೆ ಪ್ರಧಾನಿ ಮೋದಿ ಸಾಕ್ಷಿಯಾಗಿದ್ದಾರೆ. ಜಾರ್ಜ್ ಟೌನ್ ಗೆ (Georgetown) ಬಂದಿಳಿದ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ (Mohamed Irfaan Ali) ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ಬರಮಾಡಿಕೊಂಡರು.
ಪ್ರಧಾನಿ ಮೋದಿಯವರು ಇಂದು ಅಧ್ಯಕ್ಷ ಮೊಹಮದ್ ಇರ್ಫಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದು, ದಕ್ಷಿಣ ಅಮೆರಿಕಾದ ಸಂಸತ್ತಿನ ವಿಶೇಷ ಅಧಿವೇಶನ ಉದ್ಧೇಶಿಸಿ ಮಾತನಾಡಲಿದ್ದಾರೆ.
ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಕೈಗೊಂಡ ಈ ಭೇಟಿಯು ಭಾರತ ಮತ್ತು ಗಯಾನಾ ಮಧ್ಯೆ ಬಾಂಧವ್ಯ ವೃದ್ಧಿಸಲಿದೆ. ಪ್ರಧಾನಿ ಮೋದಿಯವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ `ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಹಾಗೂ ಅಲ್ಜೊತೆಗೆ ಬಾರ್ಬಡೋಸ್ ತನ್ನ ಪ್ರತಿಷ್ಠಿತ `ಆರ್ಡರ್ ಆಫ್ ಫ್ರೀಡಮ್ ಆಫ್ ಬಾರ್ಬಡೋಸ್’ ನೀಡಿ ಗೌರವಿಸಲಿದೆ.