ಪ್ರಧಾನಿ ನರೇಂದ್ರ ಮೋದಿ ಇಂದು (ಫೆಬ್ರವರಿ 5) ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಕಚೇರಿ (ಪಿಎಂಒ) ಈ ಬಗ್ಗೆ ಮಾಹಿತಿ ನೀಡಿದ್ದು, ಮೋದಿ ಅವರು ಬೆಳಿಗ್ಗೆ 11 ಗಂಟೆಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಗಂಗಾ ಮಾತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಪ್ರಯಾಗ್ರಾಜ್ ಮಹಾಕುಂಭಮೇಳವು ಪವಿತ್ರ ಧಾರ್ಮಿಕ ಸಮಾರಂಭವಾಗಿದ್ದು, ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ಈ ಬಾರಿ ಪ್ರಧಾನಿ ಮೋದಿಯವರ ಭೇಟಿ ಕುಂಭಮೇಳದ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನೂ, ಇಂದು ದೆಹಲಿಯ ವಿಧಾನಸಭಾ ಚುನಾವಣೆಗೆ 70 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂತಹ ಪ್ರಾಮುಖ್ಯ ಸಮಯದಲ್ಲಿ ಪ್ರಧಾನಿಯವರ ಮಹಾಕುಂಭಮೇಳಕ್ಕೆ ಭೇಟಿ ವಿಶೇಷ ಗಮನ ಸೆಳೆಯುತ್ತಿದೆ.